ಮೇಷ
ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ.
8
ವೃಷಭ
ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ.ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ.
3
ಮಿಥುನ
ನಿರೀಕ್ಷೆಗೆ ತಕ್ಕಂತೆ ಕೆಲಸ ಆಗದೇ ಮಾನಸಿಕ ಅಶಾಂತಿ ಕಂಡುಬರುವದು. ವ್ಯವಹಾರಗಳಲ್ಲಿ ಹಾನಿಯಾಗುವ ಭಯ ಇರುವದು. ಪರಿಣಿತರ ಅಥವಾ ಹಿರಿಯರ ಸಲಹೆಯಂತೆ ಮುಂದುವರೆಯಿರಿ. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲವಿದೆ.
6
ಕರ್ಕ
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು.
1
ಸಿಂಹ
ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು.
5
ಕನ್ಯಾ
ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು.
9
ತುಲಾ
ಅನಿಸಿಕೆಗಿಂತ ವಾಸ್ತವ ಬೇರೆ ಇರುವದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವದು ಒಳ್ಳೆಯದು. ಧನಹಾನಿಯ ಸಂಭವವಿದೆ.
2
ವೃಶ್ಚಿಕ
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು.
7
ಧನು
ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು.
4
ಮಕರ
ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.
8
ಕುಂಭ
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
3
ಮೀನ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
1
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937
Discussion about this post