ಮೇಷ
ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ.
3
ವೃಷಭ
ಮನೆಯಲ್ಲಿ ಅಸಮಾಧಾನ ಇರುವದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ.ವ್ಯಾಪಾರ ವೃದ್ಧಿಯಾಗುವದು
8
ಮಿಥುನ
ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.
6
ಕರ್ಕ
ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು.ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು.
9
ಸಿಂಹ
ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ
1
ಕನ್ಯಾ
ವಸ್ತು-ವಾಹನ-ಆಸ್ತಿ ಖರೀದಿ ಯೋಗವಿದೆ.ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಮನೆಯ ಹಿರಿಯರ ಆರೋಗ್ಯದ ಚಿಂತೆ ಇರುವದು. ಬುದ್ಧಿವಂತಿಕೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
5
ತುಲಾ
ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ.
7
ವೃಶ್ಚಿಕ
ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವದು.
7
ಧನು
ಧನ ಅಪವ್ಯಯವಾಗುವ ಲಕ್ಷಣಗಳಿವೆ ಆದರೆ ಸಣ್ಣ ವ್ಯಾಪಾರಿಗಳಿಗೆ ಉತ್ತಮ ಲಾಭವಾಗುವದು. ಶ್ರಮಿಕವರ್ಗಕ್ಕೆ ಉನ್ನತಿ ಇರುವದು. ಕೌಟುಂಬಿಕ ಸಂಬಂಧಗಳು ಫಲಿಸುವವು. ಋಣಪರಿಹಾರವಾಗುವದು.
3
ಮಕರ
ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ.
8
ಕುಂಭ
ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವದು. ಮನೋಚಿಂತಿತ ಕಾರ್ಯ ಕೈಗೂಡುವದು. ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ.
3
ಮೀನ
ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.
2
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937
Discussion about this post