Monday, April 19, 2021

ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.. ತಾ.02-04-2021 ಶುಕ್ರವಾರದ ರಾಶಿಭವಿಷ್ಯ

Must read

- Advertisement -
- Advertisement -


ಮೇಷ
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.
7

ವೃಷಭ
ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ
1

ಮಿಥುನ
ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ.
4

ಕರ್ಕ
ಮಾತಿನಂತೆಯೇ ಎಲ್ಲವೂ ನಡೆಯುವದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವದು.ಲಾಭದಾಯಕ ಹುದ್ದೆ ದೊರೆಯುವದು.
4

ಸಿಂಹ
ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು.
8

ಕನ್ಯಾ
ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವದು.
3

ತುಲಾ
ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ.ವ್ಯವಹಾರದಲ್ಲಿ ಮಂದಗತಿ ಇರುವದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ.
6

ವೃಶ್ಚಿಕ
ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡು ಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು.
8

ಧನು
ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.
2

ಮಕರ
ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ.
5

ಕುಂಭ
ದೂರ ಪ್ರಯಾಣದ ಅವಶ್ಯಕತೆ ಕಂಡುಬರುವದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು.ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ
7

ಮೀನ
ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು.
1

ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937

- Advertisement -
- Advertisement -
- Advertisement -

Latest article