ಮೇಷ
ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವದು ಆದರೂ ಕೀರ್ತಿದಾಯಕ ಫಲವಿದೆ.
3
ವೃಷಭ
ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವದು.
8
ಮಿಥುನ
ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವದು. ಹಳೆಯ ಸಾಲ ತೀರುವದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು.
1
ಕರ್ಕ
ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು.
9
ಸಿಂಹ
ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವದು. ಬಂಧುಮಿತ್ರರ ಸಹಕಾರ ದೊರೆಯುವದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವದು. ಮನೆಯಲ್ಲಿ ಸಂತಸ ಮೂಡುವದು. ಶುಭಕಾರ್ಯಗಳು ಜರುಗುವವು.
5
ಕನ್ಯಾ
ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ.
7
ತುಲಾ
ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.
4
ವೃಶ್ಚಿಕ
ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು.
6
ಧನು
ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವದು.
4
ಮಕರ
ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ.
1
ಕುಂಭ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
7
ಮೀನ
ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು.
8
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
9972848937
Discussion about this post