ಮೇಷ
ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.
5
ವೃಷಭ
ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.
7
ಮಿಥುನ
ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು.
1
ಕರ್ಕ
ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು.
8
ಸಿಂಹ
ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವದು. ಸಮತೋಲಿತ ಜೀವನವಿರುವದು.
4
ಕನ್ಯಾ
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ
5
ತುಲಾ
ತಪ್ಪುಗಳನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.
2
ವೃಶ್ಚಿಕ
ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು.
6
ಧನು
ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು.
3
ಮಕರ
ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ.
6
ಕುಂಭ
ಮಹಿಳೆಯರ ಇಷ್ಟಾರ್ಥ ಸಿದ್ಧಿಸುವದು.ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ.ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು.ನ್ಯಾಯಾಲಯದಲ್ಲಿ ಜಯ ದೊರೆಯುವದು. ವಿದ್ಯೆಯಲ್ಲಿ ಸಾಧನೆ ಇರುವದು.
8
ಮೀನ
ನಿಶ್ಚಿತ ಕೆಲಸಕ್ಕೆ ಬೆಂಬಲ ಸಿಗುವದರಿಂದ ಉತ್ತಮ ಫಲ ದೊರೆಯುವದು. ಸುಮ್ಮನೇ ಕೂಡದ ಜಾಯಮಾನ ಇರುವದರಿಂದ ಹೊಸ ಯೋಜನೆಯನ್ನು ರೂಪಿಸುವಿರಿ. ಹಿಂದಿನ ಬಾಕಿ ವಸೂಲಾತಿಗೆ ಶ್ರಮಿಸಬೇಕಾಗುವದು.
3
ಡಾ.ಬಸವರಾಜ್ ಗುರೂಜಿ ವೈದಿಕ ಜ್ಯೋತಿಷಿ
Discussion about this post