Monday, April 19, 2021

ತಾ.04-03-2021 ರ ಗುರುವಾರದ ರಾಶಿಭವಿಷ್ಯ

Must read

- Advertisement -
- Advertisement -

ಮೇಷ
ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ.
7

ವೃಷಭ
ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.
2

ಮಿಥುನ
ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು.ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವದು.
9

ಕರ್ಕ
ಅಪಮಾನ,ಅಪವಾದದಂತಹ ಸಮಸ್ಸೆಗೆ ಸಿಲುಕದಂತೆ ಜಾಗರೂಕರಾಗಿರಿ.ಈ ಸಮಯದಲ್ಲಿ ಮಾತನಾಡುವ ಬದಲು ಮಾತು ಕೇಳುವದು ಉತ್ತಮ.ಮಕ್ಕಳು ಶಾಲಾ ಕಾಲೇಜುಗಳಲ್ಲಿ ಸಾಧನೆ ತೋರುವರು.
4

ಸಿಂಹ
ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ
1

ಕನ್ಯಾ
ಅಗೌರವ ಆಗುವ ಸಂಭವ ಇರುವದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವದು.
6

ತುಲಾ
ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು.
5

ವೃಶ್ಚಿಕ
ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ.ವ್ಯಾಪಾರವೃದ್ಧಿಯಾಗುವದು. ಆರ್ಥಿಕ ಸಂಕಷ್ಟ ದೂರಾಗುವದು.
8

ಧನು
ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವದು.
3

ಮಕರ
ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವದು. ಅಡೆತಡೆಗಳ ನಿವಾರಣೆ ಯಾಗುವದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವದಿಲ್ಲ. ಹಿರಿಯರ ಸಲಹೆ ದೊರೆಯುವದು.
7

ಕುಂಭ
ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ.
2

ಮೀನ
ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.
9
ಶುಭಂಭವತು

ಡಾ.ಬಸವರಾಜ್ ಗುರೂಜಿ

ವೈದಿಕ ಜ್ಯೋತಿಷಿ
9972848937

- Advertisement -
- Advertisement -
- Advertisement -

Latest article