ನವದೆಹಲಿ : ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ (92) ಬುಧವಾರ ಶ್ರೀನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ಗಿಲಾನಿ 1990ರಿಂದ ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದಿ ಚಳುವಳಿಯನ್ನು ಮುಂದುವರಿಸಿದ್ದರು.
ತೆಹ್ರಿಕ್-ಎ-ಹುರಿಯತ್ ಎಂಬ ಕಟ್ಟರ್ ಪ್ರತ್ಯೇಕತಾವಾದಿ ಸಂಘಟನೆಯನ್ನು ಸ್ಥಾಪಿಸಿದ್ದ ಗಿಲಾನಿ, ಮೂರು ದಶಕಗಳಿಗೂ ಹೆಚ್ಚಿನ ಕಾಲ ಜಮ್ಮು ಮತ್ತು ಕಾಶ್ಮೀರ ಪ್ರತ್ಯೇಕ ರಾಜ್ಯವಾಗಬೇಕು ಎಂದು ಹೋರಾಟ ನಡೆಸಿದ್ದರು, ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಕಳೆದ 20 ವರ್ಷಗಳಿಂದ ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯ ತೀವ್ರವಾದ ಕಾರಣದಿಂದ ಸಕ್ರಿಯ ಹೋರಾಟದಿಂದ ಹಿಂದೆ ಸರಿದಿದ್ದರು. ಮಾತ್ರವಲ್ಲದೆ ತಮ್ಮ ಸ್ಥಾನಕ್ಕೂ ಕಳೆದ ವರ್ಷ ರಾಜೀನಾಮೆ ಕೊಟ್ಟಿದ್ದರು.
ನೂರಾರು ಕೋಟಿ ರೂಪಾಯಿಗಳ ಒಡೆಯನಾಗಿದ್ದ ಗಿಲಾನಿ ಸಾಕಷ್ಟು ಅಕ್ರಮ ಆಸ್ತಿ ಗಳಿಸಿರುವ ಆರೋಪ ಎದುರಿಸುತ್ತಿದ್ದಾರೆ. ಜೊತೆಗ ಇವರ ನಾಸೀಮ್, ನಯೀಮ್, ಅನಿಷಾ, ಫಾರ್ ಹಾತ್ ಸೇರಿ ಆರು ಜನರ ಮೇಲೆ NIA ತನಿಖೆ ಕೂಡಾ ನಡೆಯುತ್ತಿದೆ. ಪಾಕಿಸ್ತಾನದಿಂದ ಹಣ ಪಡೆದು, ಕಣಿವೆ ರಾಜ್ಯದಲ್ಲಿ ಹಿಂಸಾ ಕೃತ್ಯ ನಡೆಸುತ್ತಿದ್ದಾರೆ ಅನ್ನುವ ಆರೋಪ ಇವರ ಮೇಲಿದೆ.
Discussion about this post