ಭಗವಂತ ಮತ್ತು ಸತ್ಯನಿಷ್ಠೆ ಹೆಸರಿನಲ್ಲಿ ರಾಮನಗರದಿಂದ ಆಯ್ಕೆಯಾಗಿರುವ ನೂತನ ಶಾಸಕಿ, ಮುಖ್ಯಮಂತ್ರಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಶಾಸಕಿಯಾಗಿ ಗುರುವಾರ ಪ್ರತಿಜ್ಞಾವಿಧಿ ಸ್ವೀಕರಿಸಿದರು
ಗುರುವಾರ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಅವರಿಂದ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆಮಾತನಾಡಿದ ಅವರು ”ಪತಿ ಕುಮಾರಸ್ವಾಮಿ ಸಿಎಂ ಆಗಿರುವ ಕಾರಣ ಸಚಿವ ಸ್ಥಾನದ ನಿರೀಕ್ಷೆಯಲ್ಲಿಲ್ಲ ಮತ್ತು ಬೇಡಿಕೆ ಸಲ್ಲಿಸುವುದಿಲ್ಲ. ಆದರೆ, 2ನೇ ಬಾರಿಗೆ ಶಾಸಕಿಯಾಗಿರುವ ನನಗೆ ಮಹಿಳಾ ಕೋಟಾದಲ್ಲಿ ಅವಕಾಶ ಕಲ್ಪಿಸಿದರೆ ಸಮರ್ಥವಾಗಿ ನಿರ್ವಹಿಸುತ್ತೇನೆ.
ಇದನ್ನೂ ಓದಿ : ವಿಧಾನಸಭಾ ಚುನಾವಣೆಯೇ ಅನಂತ ಕುಮಾರ್ ಪ್ರಾಣಕ್ಕೆ ಮುಳುವಾಯಿತೇ..?
ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ನೀಡಿದರೆಯಶಸ್ವಿಯಾಗಿ ನಿಭಾಯಿಸಲು ಸಿದ್ಧಳಿದ್ದೇನೆ ಎಂದು ಹೇಳುವಮೂಲಕ ಸಚಿವ ಸ್ಥಾನ ಸಿಕ್ಕರೆ ಬಿಡುವುದುಂಟೇ ಎಂದು ಪರೋಕ್ಷವಾಗಿ ಹೇಳಿದರು.
ಈ ನಡುವೆ ಅನಿತಾ ಕುಮಾರಸ್ವಾಮಿಹೇಳಿಕೆಗೆ ಪ್ರತಿಕ್ರಿಯಿಸಿರುವ ಶಾಸಕರ ಸುರೇಶ್ ಕುಮಾರ್ ‘ಭಲೇ’ ಅನ್ನುವ ಪದ ಬಳಸಿ ಕುಟುಂಬ ರಾಜಕಾರಣಕ್ಕೆ ಕನ್ನಡಿ ಹಿಡಿದಿದ್ದಾರೆ.

Discussion about this post