ಹಲವು ದಿನಗಳ ಹಿಂದೆ ‘ಮಹಾರಾಷ್ಟ್ರೀಯನ್ ಪ್ರಶಸ್ತಿ’ ಸಮಾರಂಭದಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ, ನಾನು ರಾಜಕೀಯದಿಂದ ದೂರ. ಒಂದು ವೇಳೆ ಮಂತ್ರಿಯಾದರೆ ಸ್ವಚ್ಛತೆಯ ಸಚಿವೆಯಾಗಿ ಕೆಲಸ ಮಾಡುತ್ತೇನೆ ಅಂದಿದ್ದರು.
ಇದರ ಬೆನ್ನಲ್ಲೇ ಬಾಲಿವುಡ್ ಜೋಡಿ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಬಿಜೆಪಿ ಶಾಲು ಹಾಕಿಕೊಂಡಿರುವ ಫೋಟೋ ವೈರಲ್ ಆಗಿದೆ.
ಏಕ್ ಬಿಹಾರಿ ಸೌ ಪೆ ಬಿಹಾರಿ ಎಂಬ ಫೇಸ್ಬುಕ್ ಖಾತೆಯಲ್ಲಿ ರಣ್ವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಕೇಸರಿ ಬಣ್ಣದ ಶಾಲು ಹಾಕಿಕೊಂಡಿರುವ ಫೋಟೋ ಅಪ್ಲೋಡ್ ಮಾಡಲಾಗಿದೆ. ಶಾಲ್ ಮೇಲೆ ‘ವೋಟ್ ಫಾರ್ ಬಿಜೆಪಿ’ ಎಂದು ಸಹ ಬರೆಯಲಾಗಿದೆ.
ಆದರೆ ಇದೊಂದು ಎಡಿಟೆಡ್ ಫೋಟೋ, ಈ ಜೋಡಿ ಮದುವೆ ನಂತರ ಅಂದ್ರೆ 2018ರ ನವೆಂಬರ್ ತಿಂಗಳಲ್ಲಿ ಮುಂಬೈನ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೇಸರಿ ಶಾಲು ಹಾಕಿಕೊಂಡು ಫೋಟೋ ತೆಗೆಸಿಕೊಂಡಿದ್ದರು.
ಆಗ ಶಾಲು ಮೇಲೆ ಯಾವುದೇ ಅಕ್ಷರಗಳು ಇರಲಿಲ್ಲ. ಇದೀಗ ಅದನ್ನೇ ಬಳಸಿಕೊಂಡಿರುವ ಮಂದಿ ‘ವೋಟ್ ಫಾರ್ ಬಿಜೆಪಿ’ ಎಂದು ಬರೆದು ಮೈಲೇಜ್ ಪಡೆಯಲು ಹೋಗಿದ್ದಾರೆ.
Discussion about this post