ಬೆಂಗಳೂರು : ದಕ್ಷಿಣ ಭಾರತದ ಕರ್ನಾಟಕ ಕೇರಳ ಮತ್ತು ತಮಿಳುನಾಡು ಹಾಗೂ ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ರಾಜಸ್ಥಾನದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಹೇಳಿದೆ.
ನೈರುತ್ಯ ಮುಂಗಾರು ಚುರುಕಾಗಿರುವ ಕಾರಣ ಈ ರಾಜ್ಯಗಳಲ್ಲಿ ಮಳೆಯಾಗಲಿದೆ. ಜೊತೆಗೆ ದಕ್ಷಿಣ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ತೆಲಂಗಾಣ, ವಿದರ್ಭ ಮತ್ತು ದಕ್ಷಿಣ ಛತ್ತೀಸ್ ಗಢದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಸಪ್ಟೆಂಬರ್ 7 ರಿಂದ 9 ರವರೆಗೆ ವಾಯುವ್ಯ ಭಾರತ ಹಾಗೂ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲಿ ವರ್ಷಧಾರೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿಂದೆ ಸಪ್ಟಂಬರ್ 5ರ ತನಕ ಭಾರೀ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿತ್ತು.
Discussion about this post