ಬೆಂಗಳೂರು : ಕಳೆದ ಕೆಲ ದಿನಗಳ ಹಿಂದೆ ರಾಜ್ಯದಲ್ಲಿ ಅಬ್ಬರಿಸಿದ ಮಳೆ ಇತ್ತೀಚೆಗಷ್ಟೇ ಕಡಿಮೆಯಾಗಿತ್ತು. ಹಾಗಂತ ಮಳೆ ಸಂಪೂರ್ಣವಾಗಿ ನಿಂತಿಲ್ಲ. ಈ ನಡುವೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಸೋಮವಾರ ಬೆಂಗಳೂರು,ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ರಾಮನಗರ, ತುಮಕೂರು,ಬಳ್ಳಾರಿ,ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಿದೆ. ಇನ್ನು ಮಂಗಳವಾರ ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲ ಕಡೆ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಮಂಗಳವಾರದ ಬಳಿಕ ಕೊಡಗು ಮತ್ತು ಹಾಸನದ ಕೆಲ ಕಡೆ ಮಳೆಯಾಗಲಿದ್ದು ಉಳಿದಂತೆ ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ. ಜೊತೆಗೆ ದಕ್ಷಿಣ ಕನ್ನಡ ಮತ್ತು ಉಡುಪಿಯ ಕೆಲ ಭಾಗದಲ್ಲಿ ತುಂತುರು ಮಳೆಯಾಗಲಿದೆ.
Discussion about this post