ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡುವೆ ಸಿಎಂ ಹೊಸ ದಾಳ
ವಿವಿಧ ಸೌಲಭ್ಯಗಳಿಂದ ವಂಚಿತರಾದವನ್ನ ಗುರುತಿಸುವ ಉದ್ದೇಶದೊಂದಿಗೆ ತಮ್ಮ ಸರ್ಕಾರ ಸಾಮಾಜಿಕ ಗಣತಿಯನ್ನು ನಡೆಸಿದ್ದು, ಮುಂದಿನ ದಿನಗಳಲ್ಲಿ ಈ ವರದಿಯನ್ನು ಸಚಿವ ಸಂಪುಟದ ಮುಂದಿರಿಸಿ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿನಲ್ಲಿಂದು ಹಿಂದುಳಿದ ವರ್ಗಗಳ ವಸತಿ ನಿಲಯಗಳ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಾಮಾಜಿಕ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಿದ್ದು, ಆದರೆ ಹಲವು ಕಾರಣದಿಂದ ಆ ವರದಿ ಇನ್ನೂ ಜಾರಿಯಾಗಿಲ್ಲ.
ಇದನ್ನೂ ಓದಿ : ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನಗೆ ಪತ್ರ ಬರೆಯಿರಿ: ಡಿ .ಕೆ. ಶಿವಕುಮಾರ್
ದೇಶದಲ್ಲಿ ಜನಸಂಖ್ಯೆಯ ಗಣತಿಯೊಂದಿಗೆ ಜಾತಿ ಗಣತಿ ಕಾರ್ಯ ೧೯೩೦ರ ನಂತರ ಆಗಿಲ್ಲ. ಈಗ ಎಲ್ಲಾ ರಾಜ್ಯಗಳಲ್ಲಿ ಜಾತಿ ಗಣತಿ ಕುರಿತು ಚರ್ಚೆ ನಡೆಯುತ್ತಿದೆ ಎಂದರು.
ಹಿಂದುಳಿದವರಿಗೆ, ದಲಿತ-ಅಲ್ಪಸಂಖ್ಯಾತರಿಗೆ ಸಮಾನ ಅವಕಾಶ ದೊರೆಯಬೇಕೆಂಬುದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಉದೇಶವಾಗಿತ್ತು ವೈಜ್ಞಾನಿಕ ಮನೋಭಾವವನ್ನು ಬೆಳೆಸಿ ಉತ್ತಮ ಮಾನವರಾಗಿ ರೂಪಿಸುವಂತಹ ಶಿಕ್ಷಣವೇ ಗುಣಮಟ್ಟದ ಶಿಕ್ಷಣವಾಗಿದೆ ಎಂದರು.
ನಗರದ ಅಶೋಕಪುರಂನಲ್ಲಿ ನಡೆದ ಮತ್ತೊಂದು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ೨೪೫ ವೀಳ್ಯದೆಲೆ ಬೆಳೆಗಾರರಿಗೆ ಅರ್ಧ ಗುಂಟೆ ಜಾಗ ನೀಡುವುದು. ವ್ಯಾಯಾಮ ಶಾಲೆ, ಸಭಾಭವನ, ವಾಣಿಜ್ಯ ಸಂಕಿರಣ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ದುರಸ್ಥಿ ಕಾರ್ಯಗಳಿಗೆ ಹಸಿರು ನಿಶಾನೆ ತೋರಿದರು.