ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ಸುಷ್ಮಾ ಸ್ವರಾಜ್ ನೇಮಕಗೊಂಡಿರುವ ಸುದ್ದಿ ಹರಿದಾಡುತ್ತಿದೆ.
ಕೇಂದ್ರ ಸಚಿವ ಹರ್ಷವರ್ಧನ್ ಟ್ವೀಟ್ ನಿಂದ ಈ ಸುದ್ದಿ ಹರಡಿದ್ದು, ಕೇಂದ್ರ ಸರ್ಕಾರ ಈ ಸುದ್ದಿಯನ್ನು ಈ ವರೆಗೂ ದೃಢಪಡಿಸಿಲ್ಲ.
ಆಂಧ್ರಪ್ರದೇಶದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಸುಷ್ಮಾ ಸ್ವರಾಜ್ ಅವರಿಗೆ ಅಭಿನಂದನೆಗಳೆಂದು ಹರ್ಷವರ್ಧನ್ ಟ್ವೀಟ್ ಮಾಡಿದ್ದರು.
ತಕ್ಷಣವೇ ಹರ್ಷವರ್ಧನ್ ತಮ್ಮ ಟ್ವೀಟ್ ನ್ನು ಡೀಲೀಟ್ ಮಾಡಿದ್ದಾರೆ.
ಪ್ರಸ್ತುತ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಪಾಲರಾಗಿ ಇಎಸ್ಎಲ್ ನರಸಿಂಹನ್ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಲೋಕಸಭಾ ಚುನಾವಣೆ ಕಣದಿಂದ ದೂರ ಉಳಿದಿದ್ದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡುವ ಸಾಧ್ಯತೆಗಳ ಬಗ್ಗೆಯೂ ಕೆಲವು ದಿನಗಳ ಹಿಂದೆ ವರದಿ ಪ್ರಕಟವಾಗಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.
Discussion about this post