ಕೆಆರ್ ಪೇಟೆ ಉಪಚುನಾವಣೆಯಲ್ಲಿ ಸಂಸದೆ ಸುಮಲತಾ ಯಾರಿಗೆ ಬೆಂಬಲ ನೀಡುತ್ತಾರೆ ಎಂಬ ಕುತೂಹಲ ಎಲ್ಲೆಡೆ ಮನೆ ಮಾಡಿದೆ. ಇದಕ್ಕೆ ಇನ್ನೆರಡು ದಿನಗಳಲ್ಲಿ ಉತ್ತರಿಸುವುದಾಗಿ ಸುಮಲತಾ ತಿಳಿಸಿದ್ದಾರೆ.
ಕೆ.ಆರ್ ಪೇಟೆ ಉಪಚುನಾವಣಾ ಕಣದಲ್ಲಿರು ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ ಚಂದ್ರಶೇಖರ್ ಈಗಾಗಲೇ ಸುಮಲತಾ ಬೆಂಬಲ ಕೋರಿದ್ದಾರೆ.
ಎರಡು ಪಕ್ಷದ ಅಭ್ಯರ್ಥಿಗಳ ಪೈಕಿ ಪಕ್ಷೇತರ ಸಂಸದೆ ಸುಮಲತಾ ಯಾರನ್ನು ಬೆಂಬಲಿಸುತ್ತಾರೆ ಎಂಬ ಪ್ರಶ್ನೆ ಈಗ ಮಂಡ್ಯ ರಾಜಕಾರಣದಲ್ಲಿ ಮೂಡಿದೆ.
ಹಾಗೇ ನೋಡಿದರೆ ಅವರಿಗೆ ಎರಡೂ ಪಕ್ಷಗಳ ಅಭ್ಯರ್ಥಿಗಲು ಮುಖ್ಯವಾಗಿದ್ದಾರೆ. ತಾವು ಸಂಸತ್ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಜೆಡಿಎಸ್ ಎದುರಾಳಿಯಾಗಿತ್ತು. ಹೀಗಾಗಿ ಈ ಬಾರಿ ಜೆಡಿಎಸ್ ಅನ್ನು ಸುಮಲತಾ ಬೆಂಬಲಿಸುವ ಪ್ರಶ್ನೆಯೇ ಇಲ್ಲ. ಆದರೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕಣಕ್ಕಳಿದಾಗ ದೊಡ್ಡ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ನೇರವಾಗಿ ಸುಮಲತಾ ಪರ ಅಖಾಡಕ್ಕೆ ಇಳಿದ್ರೆ, ಕೆಲ ನಾಯಕರು ಪರೋಕ್ಷವಾಗಿ ಸುಮಲತಾ ಪರ ಕೆಲಸ ಮಾಡಿದ್ದರು.
ಇನ್ನು ಬಿಜೆಪಿ ಅಭ್ಯರ್ಥಿಯನ್ನೇ ಕಣಕ್ಕಿಳಿಸದೇ ಸುಮಲತಾ ಅವರೇ ಗೆಲ್ಲಬೇಕು ಅಂದಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಕೂಡಾ ಸುಮಲತಾ ಗೆಲ್ಲಿಸಿ ಎಂದು ಕರೆ ಕೊಟ್ಟಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ಸುಮಲತಾ ವಿರುದ್ಧ ಭರ್ಜರಿ ಪ್ರಚಾರ ನಡೆಸಿದ್ದರು.
Discussion about this post