ಜೈನ ಸಾಹಿತ್ಯ ಸಂಗಮದ ಪರಿವಾರದಿಂದ ಮುಂಬೈನಲ್ಲಿ ರಾಷ್ಟ್ರೀಯ ಸಮಾವೇಶದಲ್ಲಿ
ಮುಂಬರುವ ದಿನಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿಗೆ ತರಲು ಪ್ರತಿಯೊಬ್ಬರು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.
ಅಂತಾರಾಷ್ಟ್ರೀಯ ಜೈನ ಸಾಹಿತ್ಯ ಸಂಗಮದ ಪರಿವಾರದಿಂದ ಮುಂಬೈನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ದೇಶವು ಪ್ರತಿಯೊಂದು ಕ್ಷೇತ್ರದಲ್ಲೂ ಅಭೂತಪೂರ್ವ ಪ್ರಗತಿ ಸಾಧಿಸಿದ್ದು, ದೇಶದ ಆರ್ಥಿಕತೆಯನ್ನು ಬಲಪಡಿಸಿದೆ.
ಪ್ರಸ್ತುತ ನಮ್ಮ ಆರ್ಥಿಕತೆಯು ವಿಶ್ವದ ೫ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಇದನ್ನು ಮತ್ತಷ್ಟು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಕರೆ ನೀಡಿದರು.