ಇಂಗ್ಲೆಂಡ್ ನೆಲದಲ್ಲಿ ಟೀಮ್ ಇಂಡಿಯಾ ನಾಯಕಿ ಮಿಥಾಲಿ ರಾಜ್ ದಾಖಲೆ ಬರೆದಿದ್ದಾರೆ. ಅಂತರ ರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರ ಆಟಗಾರ್ತಿ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಮಿಥಾಲಿ ಈ ಸಾಧನೆ ಮಾಡಿದ್ದಾರೆ. ಈ ಹಿಂದೆ ಈ ದಾಖಲೆ ಇಂಗ್ಲೆಂಡ್ನ ಮಾಜಿ ಆಟಗಾರ್ತಿ ಚಾರ್ಲೋಟ್ ಎಡ್ವರ್ಡ್ಸ್ ಹೆಸರಿನಲ್ಲಿತ್ತು.
![mithali raj 1](https://torrentspree.com/wp-content/uploads/2021/07/mithali-raj-1.jpg)
ಎಡ್ವರ್ಡ್ಸ್ ಎಲ್ಲಾ ಆವೃತ್ತಿಗಳು ಸೇರಿ 10,273 ಅಂತಾರಾಷ್ಟ್ರೀಯ ರನ್ ಗಳಿಸಿದ್ದಾರೆ. ಇಂಗ್ಲೆಂಡ್ ವಿರುದ್ಧ ಮೂರನೇ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಈ ದಾಖಲೆಯನ್ನು ಮಿಥಾಲಿ ಮುರಿದಿದ್ದಾರೆ.
Discussion about this post