ನವದೆಹಲಿ : ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ತೀವ್ರವಾಗಿದ್ದು, ಒಮಿಕ್ರೋನ್ ರೂಪಾಂತರಿ ವೈರಸ್ ಕಾರಣದಿಂದ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಲಾರಂಭಿಸಿದೆ.
ಇಂದು ದೇಶದಲ್ಲಿ ಒಂದೇ ದಿನ 90,928 ಕೊರೋನಾ ಪ್ರಕರಣ ದಾಖಲಾಗಿದ್ದು, 325 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದ್ದು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 90,928 ಹೊಸ ಕೊರೋನಾ ಪ್ರಕರಣ ದಾಖಲಾಗಿರುವುದಾಗಿ ಹೇಳಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2,85,401ಕ್ಕೆ ಏರಿಕೆಯಾಗಿದೆ.
ಇನ್ನು ಒಂದೇ ದಿನ 325 ರೋಗಿಗಳು ಕೊರೋನಾ ಸೋಂಕಿಗೆ ಬಲಿಯಾಗಿದ್ದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 482876 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ 19,206 ಮಂದಿ ಕೊರೋನಾ ಸೋಂಕಿನಿಂದ ಮುಕ್ತರಾಗಿದ್ದಾರೆ. ಸೋಂಕಿತರು ಹಾಗೂ ಗುಣಮುಖರಾದವರ ಸಂಖ್ಯೆ ನಡುವೆ ದೊಡ್ಡ ಗ್ಯಾಪ್ ಇದ್ದು, ಆರೋಗ್ಯ ವ್ಯವಸ್ಥೆಯ ಮೇಲೆ ತೀವ್ರ ಒತ್ತಡ ಬೀಳುವ ಸಾಧ್ಯತೆಗಳಿದೆ.
Coronavirus Live Updates: 90,928 Fresh COVID-19 Cases In India Coronavirus Live Updates:A total of 2,630 cases of Omicron variant of coronavirus have been detected across 23 states and Union Territories.
Discussion about this post