ನವದೆಹಲಿ : ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಇನ್ನು ಕೆಲವೇ ದಿನಗಳು ಇರುವಂತೆ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ಭಾರತದ ಸಾಧನೆಯನ್ನು ಕೊಂಡಾಡಿದ್ದಾರೆ.
ಆಗಸ್ಟ್ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಹಲವು ಮಹತ್ವದ ಘಟನೆಗಳು ನಡೆದಿವೆ. ದಾಖಲೆ ಪ್ರಮಾಣದಲ್ಲಿ ಲಸಿಕೆ ವಿತರಣೆಯಾಗಿದೆ. ಜಿಎಸ್ಟಿ ಸಂಗ್ರಹದಲ್ಲಿ ಹೆಚ್ಚಳವಾಗಿದೆ. ಒಲಿಂಪಿಕ್ಸ್ ನಲ್ಲಿ ಭಾರತದ ಕ್ರೀಡಾಪಟುಗಳು ಸಾಧನೆ ಮಾಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಭಾರತೀಯರಿಗೆ ಹರ್ಷ ತಂದುಕೊಟ್ಟಿದೆ ಎಂದು ಪ್ರಧಾನಿ ಹೇಳಿದ್ದಾರೆ.
ಒಲಿಂಪಿಕ್ಸ್ನಲ್ಲಿ ಪಿ.ವಿ. ಸಿಂಧು ಸೇರಿದಂತೆ ದೇಶದ ಕ್ರೀಡಾಪಟುಗಳ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಪ್ರಧಾನಿ ನಮ್ಮ ಮಹಿಳಾ ಮತ್ತು ಪುರುಷ ಹಾಕಿ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ಶ್ಲಾಘಿಸಿದ್ದಾರೆ.
Discussion about this post