ವಿಧಾನಸೌಧದ ಮುಂಭಾಗದಲ್ಲಿ ಚಾರಿತ್ರಿಕ ಮಾನವ ಸರಪಳಿ ಚಳವಳಿ ಉದ್ಘಾಟನೆ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾರಿತ್ರಿಕ ಮಾನವ ಸರಪಳಿ ಚಳವಳಿಯನ್ನು ವಿಧಾನಸೌಧದ ಮುಂಭಾಗದಲ್ಲಿ ಉದ್ಘಾಟಿಸಿದರು.
ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಪ್ಪ, ಪೌರ ಕಾರ್ಮಿಕರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಈ ವಿಶ್ವ ದಾಖಲೆಯ ಕಾರ್ಯಕ್ರಮವು ಬೀದರ್ ಜಿಲ್ಲೆಯ ಬಸವ ಕಲ್ಯಾಣದಿಂದ ಚಾಮರಾಜನಗರದವರೆಗೆ ಸುಮಾರು ೨೫೦೦ ಕಿ.ಮೀ ಉದ್ದದ ಮಾನವ ಸರಪಳಿಗೆ ಸಾಕ್ಷಿಯಾಯಿತು.
ಬಳಿಕ ಮಾತನಾಡಿದ ಮುಖ್ಯಮಂತ್ರಿಯವರು, ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದು ನಿಲ್ಲಿ ಎಂದು ಕರೆ ನೀಡಿದರು.
ಬಾಬಾ ಸಾಹೇಬ್ ಡಾ ಅಬೇಂಡ್ಕರ್ ಭಾಷಣ ಪ್ರಸ್ತಾಪಿಸಿ ಆರ್ಥಿಕ-ಸಾಮಾಜಿಕ ಪ್ರಜಾಪ್ರಭುತ್ವ ಎಲ್ಲರಿಗೂ ಸಿಕ್ಕಾಗ ಮಾತ್ರ ರಾಜಕೀಯ ಸ್ವಾತಂತ್ರಕ್ಕೆ ಅರ್ಥ ಬರುತ್ತದೆ ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು ಎಂದು ಹೇಳಿದರು.