ದಕ್ಷಿಣ ಇರಾಕ್ ನ ನಾಸಿರಿಯಾದಲ್ಲಿರುವ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅವಘಢ ಸಂಭವಿಸಿದ್ದು 39ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ.
ಇದೀಗ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಬೆಂಕಿ ಅವಘಢ ಸಂಭವಿಸಿದ ಅಲ್-ಹುಸೇನ್ ಕೋವಿಡ್ ಆಸ್ಪತ್ರೆಯಲ್ಲಿ ಶೋಧ ಕಾರ್ಯನಡೆಯುತ್ತಿದೆ.
ಈ ಹಿಂದೆ ಏಪ್ರಿಲ್ ತಿಂಗಳಲ್ಲಿ ಆಕ್ಸಿಜನ್ ಟ್ಯಾಂಕರ್ ಸ್ಫೋಟಗೊಂಡು ಬಾಗ್ದಾದ್ ನಲ್ಲಿ ಆಸ್ಪತ್ರೆಯೊಂದು ಬೆಂಕಿಗೆ ಆಹುತಿಯಾಗಿತ್ತು. ಆ ಘಟನೆಯಲ್ಲಿ 80ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು.
Discussion about this post