ಆದಾಯ ತೆರಿಗೆ ವಂಚನೆ ಆರೋಪದಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಜಿ ಡಿಸಿಎಂ ಪರಮೇಶ್ವರ್ ಸಾಮ್ರಾಜ್ಯದ ಮೇಲೆ ದಾಳಿ ನಡೆಸಿದ್ದಾರೆ. ಅವರು ಏಕಾಏಕಿ ಬೆಳೆಸಿದ ಶಿಕ್ಷಣ ಸಂಸ್ಥೆ, ಬೆಂಗಳೂರು ಹಾಗೂ ತುಮಕೂರು ನಿವಾಸಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಈ ನಡುವೆ ಕೊರಟಗೆರೆ ಪ್ರವಾಸಿ ಮಂದಿರದಲ್ಲಿ ಪರಮೇಶ್ವರ್ ಅವರನ್ನು ವಿಚಾರಣೆಗೆ ಒಳಪಡಿಸಿದ ಇಬ್ಬರು ಐಟಿ ಅಧಿಕಾರಿಗಳು ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ.
ಅರ್ಧ ಗಂಟೆಗೂ ಹೆಚ್ಚಿನ ವಿಚಾರಣೆ ನಂತರ ಮತ್ತಷ್ಟು ವಿಚಾರಣೆಗಾಗಿ ಪರಮೇಶ್ವರ್ ಅವರನ್ನು ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆ ತಂದಿದ್ದಾರೆ. ಇಲ್ಲೂ ಅವರ ವಿಚಾರಣೆ ಮುಂದುವರಿಯಲಿದೆ.
Discussion about this post