ಕಲಬುರಗಿ : ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಲಬುರಗಿಯ ಕೋಟನೂರು ಬಳಿ ನಡೆದಿದೆ.
ತಡರಾತ್ರಿ ಒಂದು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಉಲ್ಲಾಸ್ (26), ಖಾಸಿಂ (26) ಮತ್ತು ರಾಹುಲ್ (25) ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಬೆನ್ನಲ್ಲೇ ಪೊಲೀಸರು ಸ್ಥಳತ್ಕೆ ದೌಡಾಯಿಸಿದ್ದು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.
ಘಟನೆಯಲ್ಲಿ ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಖಾಸಗಿ ಆಶ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರೂ ಕಲಬುರಗಿ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ಜೇವರ್ಗಿಯಿಂದ ಕಲಬುರಗಿ ನಗರಕ್ಕೆ ಬರುತ್ತಿದ್ದು, ಟ್ಯಾಂಕರ್ ಕಲಬುರಗಿಯಿಂದ ಜೇವರ್ಗಿ ಕಡೆಗೆ ಹೋಗುತ್ತಿತ್ತು ಎಂದು ಗೊತ್ತಾಗಿದೆ.
Discussion about this post