ಬೆಂಗಳೂರು : ನಿತ್ಯೋತ್ಸವದ ಕವಿ ಎಂದೇ ಹೆಸರಾಗಿದ್ದ ಕೆ ಎಸ್ ನಿಸಾರ್ ಅಹಮದ್ ನಿಧನ ಹೊಂದಿದ್ದಾರೆ. ಕೆಎಸ್ಆರ್ ಎಂದೇ ಪ್ರಸಿದ್ಧರಾಗಿದ್ದ ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಬೆಂಗಳೂರಿನ ಅವರ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.
ಪ್ರೊ. ಕೆ.ಎಸ್.ನಿಸಾರ್ ಅಹಮದ್ ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರುವರಿ 5 1936ರಲ್ಲಿ ಜನಿಸಿದರು. 1959ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.
ನಿಸಾರ್ ಅಹಮದ್ ಅವರಿಗೆ 10ನೇ ವಯಸ್ಸಿನಲ್ಲೇ ಸಾಹಿತ್ಯದ ಅಭಿರುಚಿ ಅಂಟಿಕೊಂಡಿತ್ತು. ಜಲಪಾತದ ಬಗ್ಗೆ ಬರೆದ ಕವನ ಕೈಬರಹದ ಪತ್ರಿಕೆಯಲ್ಲಿ ಅಚ್ಚಾಗಿತ್ತು. ಅವರು ಈವರೆಗೆ 21 ಕವನ ಸಂಕಲನಗಳು, 14 ವೈಚಾರಿಕೆ ಕೃತಿಗಳು, 5 ಮಕ್ಕಳ ಸಾಹಿತ್ಯ ಕೃತಿಗಳು, 5 ಅನುವಾದ ಕೃತಿಗಳು, 13 ಸಂಪಾದನಾ ಗ್ರಂಥಗಳನ್ನು ಹೊರತಂದಿದ್ದಾರೆ.
Discussion about this post