ಬೆಂಗಳೂರು : ಗೊಂದಲದ ಗೂಡಾಗಿರುವ ಪಿಯುಸಿ ಫಲಿತಾಂಶ ಪ್ರಕಟಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಬೆಂಗಳೂರಿನಲ್ಲಿ ಪಿಯುಸಿ ಫಲಿತಾಂಶದ ದಿನಾಂಕವನ್ನು ಪ್ರಕಟಿಸಿದ್ದು ಜುಲೈ 2ನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದಾರೆ.
ಇನ್ನು ರಿಪಿಟರ್ಸ್ ಗಳ ಕುರಿತಂತೆ ಜುಲೈ 5ರ ಒಳಗೆ ನಿರ್ಧಾರ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹೀಗಾಗಿ ಇನ್ನೆರೆಡು ದಿನಗಳ ಒಳಗಾಗಿ ನಿರ್ಧಾರ ಕೈಗೊಳ್ಳುವುದಾಗಿ ಸುರೇಶ್ ಕುಮಾರ್ ಹೇಳಿದ್ದಾರೆ. ಅಷ್ಟೇ ಅಲ್ಲದೆ ಪಿಯುಸಿ ಫಲಿತಾಂಶದ ಬಳಿಕ ಯಾವುದೇ ವಿದ್ಯಾರ್ಥಿಗೆ ಫಲಿತಾಂಶದ ಬಗ್ಗೆ ಅಸಮಾಧಾನವಿದ್ದು, ಪರೀಕ್ಷೆ ಬರೆದು ತೇರ್ಗಡೆಯಾಗಲು ಬಯಸಿದರೆ ಪಿಯು ಬೋರ್ಡ್ ಅದಕ್ಕೂ ವ್ಯವಸ್ಥೆ ಕಲ್ಪಿಸಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ವರ್ಷ ಎರಡೇ ದಿನ SSLC ಪರೀಕ್ಷೆ : ದಿನಾಂಕ ಪ್ರಕಟಿಸಿದ ಶಿಕ್ಷಣ ಸಚಿವ ಸುರೇಶ್
ಬೆಂಗಳೂರು : ಕೊನೆಗೂ SSLC ಪರೀಕ್ಷೆಯ ದಿನಾಂಕ ಪ್ರಕಟಗೊಂಡಿದ್ದು, ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷೆ ದಿನಾಂಕವನ್ನು ಪ್ರಕಟಿಸಿದ್ದಾರೆ.
ಈ ಬಾರಿ ಕೇವಲ ಎರಡು ದಿನ SSLC ಪರೀಕ್ಷೆ ನಡೆಯಲಿದ್ದು, ಜುಲೈ 19ರಂದು 10.30 ರಿಂದ 1.30ರ ತನಕ ಮೊದಲ ಪರೀಕ್ಷೆ ನಡೆಯಲಿದೆ. ವಿಜ್ಞಾನ ಗಣಿತ ಸಮಾಜ ವಿಜ್ಞಾನ ಸೇರಿ 1 ಪರೀಕ್ಷೆ ನಡೆಯಲಿದೆ.
ಜುಲೈ 22 ರಂದು ಎರಡನೇ ಪರೀಕ್ಷೆ ನಡೆಯಲಿದ್ದು ಕನ್ನಡ, ಹಿಂದಿ, ಇಂಗ್ಲೀಷ್ ಸೇರಿ ಎರಡನೇ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಜೂನ್ 29 ರಂದು ಎಲ್ಲಾ ಶಾಲೆಗಳಿಗೆ ಮಕ್ಕಳ ಹಾಲ್ ಟಿಕೆಟ್ ಗಳು ತಲುಪಲಿದೆ.
ಇನ್ನು ಪರೀಕ್ಷೆ ಬರೆಯುವ ಮಕ್ಕಳಿಗೆ ಕೊರೋನಾ ಸೋಂಕಿನ ಲಕ್ಷಣಗಳಿದ್ದರೆ ಆ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಯಿಸಲಾಗುವುದು ಎಂದು ಹೇಳಿರುವ ಶಿಕ್ಷಣ ಸಚಿವರು, ಕೊರೋನಾ ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆಯಲು ಆಸಕ್ತಿ ತೋರಿದರೆ ಅವರಿಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
Discussion about this post