ಬೆಂಗಳೂರು : 6 ತಿಂಗಳ ಬಳಿಕ ರಾಜ್ಯ ವಿಧಾನಸಭೆಯ ಅಧಿವೇಶನ ಇಂದಿನಿಂದ ಪ್ರಾರಂಭಗೊಳ್ಳಲಿದೆ. ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ಇನ್ನು 10 ದಿನಗಳ ಕಾಲ ನಡೆಯಲಿರುವ ಅಧಿವೇಶನದಲ್ಲಿ ಸರ್ಕಾರದ ಬೆವರಿಳಿಸಲು ಕಾಂಗ್ರೆಸ್ ಸಿದ್ದತೆ ಮಾಡಿಕೊಂಡಿದೆ.
ಈ ಬಾರಿಯ ಅಧಿವೇಶನದಲ್ಲಿ ಬೆಲೆ ಏರಿಕೆ, ನೆರೆ, ಬರ ಪರಿಹಾರ, ಕೇಂದ್ರದಿಂದ GST ಬಾಕಿ, ಪಡಿತರ ಆಹಾರ ಕಡಿತ, ಮೈಸೂರು ಅತ್ಯಾಚಾರ, ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ಸಿಗದ ಪರಿಹಾರ ಸಂಪುಟ ಸಚಿವರ ಭ್ರಷ್ಟಚಾರ ಸೇರಿದಂತೆ ಅನೇಕ ವಿಷಯಗಳನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ. ಇನ್ನು ಜೆಡಿಎಸ್ ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆಗಳಿಲ್ಲ ಎನ್ನಲಾಗಿದೆ.

ಇನ್ನು 10 ದಿನಗಳ ಅಧಿವೇಶನದಲ್ಲಿ 18 ವಿಧೇಯಕಗಳನ್ನು ಮಂಡಿಸಲು ರಾಜ್ಯ ಸರ್ಕಾರ ಸಿದ್ದತೆ ಮಾಡಿಕೊಂಡಿದೆ.ಜೊತೆಗೆ ನಾಲ್ಕು ಸುಗ್ರೀವಾಜ್ಞೆಗಳು ಕೂಡಾ ಇದೇ ಅಧಿವೇಶನದಲ್ಲಿ ಮಂಡನೆಯಾಗಲಿದೆ.
The ten-day monsoon session is the first for Basavaraj Bommai, as the Chief Minister and his new cabinet, which took charge following the exit of state BJP strongman B S Yediyurappa in July-end.
Discussion about this post