ಬೆಂಗಳೂರು : ಕಲಬುರಗಿ ಪಾಲಿಕೆಯಲ್ಲಿ 15 ಸ್ಥಾನ ಗೆಲ್ಲವು ಕನಸು ಕಾಣುತ್ತಿದ್ದ ಜೆಡಿಎಸ್ ನಾಲ್ಕು ಸ್ಥಾನಗಳಿಗೆ ತೃಪ್ತಿಪಟ್ಟಿದೆ. ಹೀಗಾಗಿ ಇದೀಗ ಅಧಿಕಾರ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಮತ್ತು ಬಿಜೆಪಿಗೆ ಜೆಡಿಎಸ್ ಬೆಂಬಲ ಅನಿವಾರ್ಯವಾಗಿದೆ. ಕಲಬುರಗಿ ಪಾಲಿಕೆ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾದರೆ, ಕಾಂಗ್ರೆಸ್ ಗಿಂತಲೂ ಮಲ್ಲಿಕಾರ್ಜುನ ಖರ್ಗೆಯವರಿಗೆ ತಮ್ಮ ಹಾಗೂ ಮಗನ ರಾಜಕೀಯ ಭವಿಷ್ಯದ ಚಿಂತೆ.

ಹೀಗಾಗಿ ಇದೀಗ ಮೈತ್ರಿ ಮಾಡಿಕೊಳ್ಳುವ ಸಲುವಾಗಿ ದೇವೇಗೌಡರೊಂದಿಗೆ ಮಾತುಕತೆ ನಡೆಸಿರುವ ಮಲ್ಲಿಕಾರ್ಜುನ ಖರ್ಗೆ, ಕೋಮುವಾದಿಗಳನ್ನು ದೂರವಿಡುವ ಸಲುವಾಗಿ ನಮಗೆ ಬೆಂಬಲಕೊಡಿ ಎಂದು ಮನವಿ ಮಾಡಿದ್ದಾರೆ. ಮತ್ತೊಂದು ಕಡೆ ಕುಮಾರಸ್ವಾಮಿಯವರನ್ನು ನಿನ್ನೆಯೇ ಸಂಪರ್ಕಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಜೆಡಿಎಸ್ ಬೆಂಬಲ ಕೋರಿದ್ದಾರೆ.
ಇನ್ನು ಈ ಬೆಳವಣಿಗೆ ಕುರಿತಂತೆ ಮಾತನಾಡಿರುವ ಮಾಜಿ ಪ್ರಧಾನಿ ದೇವೇಗೌಡರು ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆ ನಮ್ಮ ಜೊತೆ ಮಾತನಾಡಿದ್ದಾರೆ. ಹೀಗಾಗಿ ದೋಸ್ತಿ ಮಾಡಿಕೊಳ್ಳುವ ಬಗ್ಗೆ ಸ್ಥಳೀಯ ಮುಖಂಡರನ್ನು ಕರೆಸಿ ಮಾತನಾಡಿ ತೀರ್ಮಾನ ಕೈಗೊಳ್ಳುತ್ತೇವೆ ಅಂದಿದ್ದಾರೆ.
Discussion about this post