ಬಿಜೆಪಿ ಕಾರ್ಯಕರ್ತರನ್ನ ವಶಕ್ಕೆ ಪಡೆದ ಪೊಲೀಸರು
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ತನಿಖೆ ಆದೇಶಕ್ಕೆ ಹೈಕೋರ್ಟ್ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಅವರ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗದಗದಲ್ಲಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜು ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಕೋಲಾರ ಜಿಲ್ಲಾ ಜೆಡಿಎಸ್ ಪರಿಶಿಷ್ಠ ಘಟಕದ ಜಿಲ್ಲಾ ಉಪಾಧ್ಯಕ್ಷ ಯಲುವಗುಳಿ ನಾಗರಾಜ್ ಒತ್ತಾಯಿಸಿದ್ದಾರೆ.