ಬೆಂಗಳೂರು : ಅಗಸ್ಟ್ 28-29 ಮತ್ತು 30ರಂದು ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶ ಸಪ್ಟೆಂಬರ್ 20ರಂದು ಪ್ರಕಟಿಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸೀಟು ಹಂಚಿಕೆ ಪ್ರಕ್ರಿಯೆಯನ್ನು ಯಾವುದೇ ಗೊಂದಲವಿಲ್ಲದೆ ಪೂರ್ಣಗೊಳಿಸಲಾಗುವುದು ಅಂದಿದ್ದಾರೆ.
ಈ ನಡುವೆ ಇಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮುಂದಿನ ವಾರ ಈ ಬಗ್ಗೆ ಸಭೆ ಕರೆಯಲಾಗಿದೆ.ವಿದ್ಯಾರ್ಥಿಗಳ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಇನ್ನು ರಾಷ್ಟ್ರೀಯ ಶಿಕ್ಷಣ ನೀತಿಗೆ ಕಾಂಗ್ರೆಸ್ ಅಪಸ್ವರ ಎತ್ತಿರುವುದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಸಿದ್ದರಾಮಯ್ಯ ಅವರಿಗೆ ಮಾಧ್ಯಮ ಸೇರಿದಂತೆ ವಿವಿಧ ವೇದಿಕೆಗಳಲ್ಲಿ ಉತ್ತರ ನೀಡಲಾಗಿದೆ. ಇನ್ನು ಅವರಿಗೆ ವಿಧಾನಮಂಡಲ ಅಧಿವೇಶನದಲ್ಲೇ ತಕ್ಕ ಉತ್ತರ ನೀಡುವುದಾಗಿ ಹೇಳಿದರು.
Discussion about this post