ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ವ್ಯಕ್ತಿಯೊಬ್ಬರು ಯಡಿಯೂರಪ್ಪ ರಾಜೀನಾಮೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗ್ರಾಮದ ರವಿ (35) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಈತ ಯಡಿಯೂರಪ್ಪ ಕಟ್ಟಾ ಅಭಿಮಾನಿಯಾಗಿದ್ದ ಎಂದು ಸ್ಥಳೀಯರು ಹೇಳಿದ್ದಾರೆ.
ಈ ಘಟನೆಗೆ ಬೇಸರ ವ್ಯಕ್ತಪಡಿಸಿರುವ ಯಡಿಯೂರಪ್ಪ ಅಭಿಮಾನದಿಂದ ಅತಿರೇಕಕ್ಕೆ ಹೋಗಬೇಡಿ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ನನ್ನ ರಾಜೀನಾಮೆಯಿಂದ ಮನನೊಂದು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ನಾನು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ’ ಅಂತಾ ಟ್ವೀಟ್ ನಲ್ಲಿ ಹೇಳಿದ್ದಾರೆ.
ಇನ್ನು ಈ ಘಟನೆಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೂಡಾ ಆತಂಕ ವ್ಯಕ್ತಪಡಿಸಿದ್ದು, ತಾಳ್ಮೆ ಸಂಯಮ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.
Discussion about this post