ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯ
ವಿಜ್ಞಾನದ ಬೆಳವಣಿಗೆಯಿಂದ ಮಾತ್ರ ದೇಶದ ಸರ್ವತೋಮುಖ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಮಂದಿರ ಐಐಎಸ್ಸಿಯಲ್ಲಿ ನಡೆದ ೨೦೨೨ ಮತ್ತು ೨೦೨೩ ನೇ ಸಾಲಿನ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ಅವರು, ಪ್ರಶಸ್ತಿ ಪುರಸ್ಕೃತ ವಿಜ್ಞಾನಿಗಳ ಸಾಧನೆ ಯುವ ಪೀಳಿಗೆಗೆ ಆದರ್ಶವಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಆಗಿರುವುದಕ್ಕೆ ಹಲವು ವಿಜ್ಞಾನಿಗಳ, ತಂತ್ರಜ್ಞರ ಕೊಡುಗೆ ಇದೆ ಎಂದು ತಿಳಿಸಿದ್ದಾರೆ. ವಿಜ್ಞಾನದ ಆಸಕ್ತಿ ಹೆಚ್ಚಿ, ವಿಜ್ಞಾನಿಗಳ ಸಂಖ್ಯೆ ಹೆಚ್ಚಾದರೆ ದೇಶದ ಬೆಳವಣಿಗೆ ಸಾಧ್ಯ ಎಂದು ಪ್ರತಿಪಾದಿಸಿದ್ದಾರೆ.