ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ತಾಲ್ಲೂಕು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಹಾಗೂ ತಿತಿಮತಿ ಪ್ರಾದೇಶಿಕ ವಲಯ ಅರಣ್ಯ ಘಟಕದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಪೊನ್ನಂಪೇಟೆ ತಾಲ್ಲೂಕಿನ ಸುಳುಗೋಡು ಗ್ರಾಮದ ಗಣೇಶ್ ವೈ.ಸಿ. (20), ಕೋತೂರು ಗ್ರಾಮದ ಸಂತೋಷ್ ಕೆ.ವಿ (25), ಸುಳುಗೋಡು ಗ್ರಾಮದ ಸಂತೋಷ್ ಕುಮಾರ್ ಹೆಚ್.ಆರ್ (29) ಹಾಗೂ ಚಿಕ್ಕಮಂಡೂರು ಗ್ರಾಮದ ಪೆಮ್ಮಂಡ ಪವನ್ ಪೂವಯ್ಯ ಎಂದು ಗುರುತಿಸಲಾಗಿದೆ.

ಗೋಣಿಕೊಪ್ಪದ ಚೆನ್ನಂಗೊಲ್ಲಿ ಬಸ್ ತಂಗುದಾಣದ ಬಳಿ ಅಕ್ರಮವಾಗಿ ಹುಲಿ ಹಲ್ಲುಗಳನ್ನು ಮಾರಾಟ ಮಾಡಲು ತಂಡವೊಂದು ಯತ್ನಿಸುತ್ತಿದೆ ಅನ್ನುವ ಮಾಹಿತಿ ದೊರೆತ ಹಿನ್ನಲೆಯಲ್ಲಿ ದಾಳಿ ನಡೆಸಿದ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಆರು ಹುಲಿಯ ಹಲ್ಲುಗಳು ಮತ್ತು ಎರಡು ದ್ವಿಚಕ್ರವಾಹನ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳನ್ನು JMFC ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Discussion about this post