ಚಿಕ್ಕಬಳ್ಳಾಪುರ : ವಿದ್ಯುತ್ ಬೇಲಿಯೊಂದಕ್ಕೆ ಸಿಲುಕಿ ರೈತರೊಬ್ಬರು ಮೃತಪಟ್ಟ ಬೆನ್ನಲೇ ಬೇಲಿಗೆ ವಿದ್ಯುತ್ ಸಂಪರ್ಕ ಕೊಟ್ಟ ಜಮೀನು ಮಾಲೀಕನನ್ನು ಸ್ಥಳೀಯರೇ ಹೊಡೆದು ಸಾಯಿಸಿರುವ ಘಟನೆ ಚಿಕ್ಕಬಳ್ಳಾಪುರದ ಚರಕಮಟ್ಟೇನಹಳ್ಳಿ ಗ್ರಾಮದ ಚಿಕ್ಕಹನುಮೇನಹಳ್ಳಿಯಲ್ಲಿ ನಡೆದಿದೆ.
ಸ್ಥಳೀಯ ಜಮೀನು ಮಾಲೀಕ ಅಶ್ವತ್ಥ ರಾವ್ ತಮ್ಮ ಟೊಮ್ಯಾಟೊ ತೋಟಕ್ಕೆ ಅಕ್ರಮವಾಗಿ ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದರು ಎನ್ನಲಾಗಿದೆ. ಜಮೀನಿಗೆ ವಿದ್ಯುತ್ ಬೇಲಿ ಅಳವಡಿಸಿದ್ದರು. ಇದರ ಅರಿವಿಲ್ಲದೆ ರೈತ ವಸಂತರಾವ್ ವಿದ್ಯುತ್ ಬೇಲಿಗೆ ಬಲಿಯಾಗಿದ್ದರು.
ರೈತ ವಸಂತರಾವ್ ವಿದ್ಯುತ್ ತಂತಿಗೆ ಬಲಿಯಾದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಗ್ರಾಮಸ್ಥರು ಜಮೀನು ಮಾಲೀಕ ಅಶ್ವತ್ಥ ರಾವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾತ್ರವಲ್ಲದೆ ಹೊಡೆದು ಹಲ್ಲೆ ಮಾಡಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡ ಅಶ್ವತ್ಥ ರಾವ್ ಅವರನ್ನು ದೊಡ್ಡಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟು ಹೊತ್ತಿಗೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
Discussion about this post