ಮಂಗಳೂರು : ಅಪ್ರಾಪ್ತ ಬಾಲಕಿಯೊಬ್ಬಳಿಗೆ ಮತ್ತು ಬರಿಸಿ ಸಾಮೂಹಿಕ ಅತ್ಯಾಚಾರವೆಸಗಿರುವ ಅಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಪ್ರಸ್ತುತ ಸಂತ್ರಸ್ತ ಅಪ್ರಾಪ್ತೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಬಳಿಕ ಕೇಂದ್ರ ಭಾಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ 5 ಜನ ಮತ್ತು ಬರಿಸಿ ಕೀಚಕ ಕೃತ್ಯ ಎಸಗಿದ್ದಾರೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಬಾಲಕಿಯನ್ನು ಅತ್ಯಾಚರವೆಸಗಿರುವ ಆರೋಪ ಕೇಳಿ ಬಂದಿದೆ. ಬಂಟ್ವಾಳದಿಂದ ಈ ಬಾಲಕಿಯನ್ನು ಅಪಹರಿಸಲಾಗಿದ್ದು ಬಳಿಕ ಅಮ್ಟಾಡಿ ಅನ್ನುವ ಪ್ರದೇಶಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ದುರಂತ ಅಂದ್ರೆ ಈ ಘಟನೆಯ ಬಗ್ಗೆ ಅದ್ಯಾವ ‘ಪ್ರಪ’ರಾಗಲಿ, ರಾಜಕೀಯ ಪಕ್ಷದ ನಾಯಕರಾಗಲಿ ದನಿ ಎತ್ತಿಲ್ಲ. ಬೇರೆ ರಾಜ್ಯಗಳಲ್ಲಿ ಈ ರೀತಿ ದುಷ್ಕೃತ್ಯ ನಡೆದರೆ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತದೆ, ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಟೀಕೆಗಳು, ಆಕ್ರೋಶ ಕೇಳಿ ಬರುತ್ತದೆ. ಕನಿಷ್ಟ ಪಕ್ಷ ಹೀಗಾದ್ರೆ ಕಾನೂನು ಸುವ್ಯವಸ್ಥೆ ಬಿಗಿ ಮಾಡುವ ಒತ್ತಡಕ್ಕೆ ವ್ಯವಸ್ಥೆ ಸಿಲುಕುತ್ತದೆ. ಕರ್ನಾಟಕದಲ್ಲಿ ಹೀಗೆ ಕೀಚಕ, ನೀಚ ಕೃತ್ಯಗಳು ನಡೆದ ಅದು ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದೇ ಇಲ್ಲ.
Discussion about this post