ಮಂಗಳೂರು : SSLC ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅಪಘಡ ಸಂಭವಿಸಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಬಬ್ಬುಕಟ್ಟೆಯಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಶಾಲೆಯ ಲ್ಯಾಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲ್ಯಾಬ್ ಪಕ್ಕದಲ್ಲೇ SSLC ಪರೀಕ್ಷಾ ಕೇಂದ್ರವಿದ್ದು, ಅಲ್ಲೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು.
ಯಾವಾಗ ದಟ್ಟ ಹೊಗೆ ಕಾಣಿಸಿಕೊಂಡಿತೋ ಎಚ್ಚೆತ್ತುಕೊಂಡ ಶಿಕ್ಷಕರು ಮೇಲಾಧಿಕಾರಿಗಳ ಆದೇಶಕ್ಕೆ ಕಾಯದೆ ಮಕ್ಕಳನ್ನು ಬೇರೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡುವ ಮೂಲಕ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಶಿಕ್ಷಕರು ಎಚ್ಚೆತ್ತುಕೊಳ್ಳದಿರುತ್ತಿದ್ರೆ ದೊಡ್ಡ ಅನಾಹುತವೊಂದಕ್ಕೆ ದಕ್ಷಿಣ ಕನ್ನಡ ಸಾಕ್ಷಿಯಾಗುತ್ತಿತ್ತು.
ಇನ್ನು ಘಟನೆ ಬೆನ್ನಲ್ಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಶಿಕ್ಷಕರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.
Discussion about this post