ಮತ್ತೆ 6 ವಿಧೇಯಕವನ್ನು ಸರ್ಕಾರಕ್ಕೆ ವಾಪಾಸ್ ಕಳುಹಿಸಿದ ರಾಜಭವನ
ಸಿಎಂ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ನಡುವೆ ಸಿದ್ದರಾಮಯ್ಯ ಅವರನ್ನು ದಾರಿ ತಪ್ಪಿಸಲಾಗುತ್ತಿದೆ ಅನ್ನೋ ಮಾತುಗಳು ಕೂಡಾ ಕೇಳಿ ಬರುತ್ತಿದೆ. ಇದೆಲ್ಲದರ ನಡುವೆ ಯಾವಾಗ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೊಟ್ಟರೋ, ರಾಜ್ಯ ಸರ್ಕಾರ ರಾಜಭವನದ ವಿರುದ್ಧ ತಿರುಗಿ ಬಿದ್ದಿದೆ.
ಐವನ್ ಡಿ ಸೋಜಾರಂತಹ ಕಾಂಗ್ರೆಸ್ ನಾಯಕರು ಬಾಂಗ್ಲಾ ದೇಶದ ಉದಾಹರಣೆ ಕೊಡುವ ಮೂಲಕ ತಮ್ಮ ಜ್ಞಾನ ಭಂಡಾರವನ್ನು ಪ್ರದರ್ಶಿಸಿದ್ದಾರೆ. ಈ ಹೊತ್ತಿನಲ್ಲೇ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಪರ್ಷ ಶುರುವಾಯ್ತೇ ಅನ್ನೋ ಅನುಮಾನ ಶುರುವಾಗಿದೆ.
ಆಗಸ್ಟ್ ತಿಂಗಳಲ್ಲಿ ರಾಜ್ಯಪಾಲರು ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಈ ಮೂಲಕ 2024ರ ಜನವರಿಯಿಂದ ಆಗಸ್ಟ್ ತಿಂಗಳ ತನಕ ಹಿಂತಿರುಗಿಸಿದ ವಿಧೇಯಕಗಳ ಸಂಖ್ಯೆ 11ಕ್ಕೆ ಏರಿದೆ.
ಯಾವೆಲ್ಲಾ ಮಸೂದೆಗಳು ಮರಳಿ ಬಂತು
ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ, ಸಂಸ್ಕೃತಿ. ಪ್ರದರ್ಶನ ಪ್ರಾಧಿಕಾರ ವಿಧೇಯಕ, ರೇಣುಕಾ ಎಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಪುರಸಭೆಗಳು ಮತ್ತು ಕೆಲ ಇತರ ಕಾನೂನು ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ town and country planning ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕಾ ಪರೀಕ್ಷಾ ಭ್ರಷ್ಟಚಾರ ತಡೆ ವಿಧೇಯಕ
ಈ ಎಲ್ಲಾ ವಿಧೇಯಕಗಳ ಮೇಲೆ ರಾಜ್ಯಪಾಲರು ಅನೇಕ ಸ್ಪಷ್ಟನೆಗಳನ್ನು ಕೇಳಿದ್ದಾರೆ. ಪ್ರತಿಯೊಂದು ಕಾಯಿದೆಯಲ್ಲಿನ ಲೋಕ, ಕಾನೂನು ತೊಡಕು, ಗೊಂದಲಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದು ಅವುಗಳಿಗೆ ಹೆಚ್ಚಿನ ಮಾಹಿತಿ ಬಯಸಿದ್ದಾರೆ.
ಈಗಾಗಲೇ ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ವಿಧೇಯಕಗಳು ಹಿಂದಕ್ಕೆ ಬಂದಿರೋದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.