ಬೆಂಗಳೂರು : ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ದ್ವೀತಿಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿತ್ತು. ಜೊತೆಗೆ ಈ ಹಿಂದಿನ ಪ್ರಥಮ ಪಿಯುಸಿ ಮತ್ತು SSLC ಪರೀಕ್ಷೆಯ ಅಂಕದ ಆಧಾರದಲ್ಲಿ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ ಇದೀಗ ಫಲಿತಾಂಶ ಪ್ರಕಟಿಸದಂತೆ ತಡೆಯಾಜ್ಞೆ ನೀಡಿದೆ.
ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದ ಕೆಲ ವಿದ್ಯಾರ್ಥಿಗಳು ಸಾರ್ವಜನಿಕ ಹಿತಾಸಕ್ತಿಯನ್ನು ಅರ್ಜಿಯನ್ನು ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಫ್ರೆಶರ್ಸ್ ವಿದ್ಯಾರ್ಥಿಗಳನ್ನು ಪಾಸ್ ಮಾಡಿ, ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತು.
ಹೀಗಾಗಿ ಪಿಯುಸಿ ಫಲಿತಾಂಶಕ್ಕೆ ತಡೆ ನೀಡಿದ ನ್ಯಾಯಾಲಯ, ಪಾಸ್ ಮಾಡುವುದಾದರೆ ಎಲ್ಲಾ ವಿದ್ಯಾರ್ಥಿಗಳನ್ನೂ ಪಾಸ್ ಮಾಡಬೇಕು, ತಾರತಮ್ಯ ಮಾಡೋದು ಸರಿಯಲ್ಲ. ಈ ಬಗ್ಗೆ ಸರ್ಕಾರದ ನಿಲುವೇನು ಅನ್ನುವುದನ್ನು ಗುರುವಾರದೊಳಗೆ ತಿಳಿಸಿ ಎಂದು ವಿಚಾರಣೆಯನ್ನು ಜೂನ್ 17ಕ್ಕೆ ಮುಂದೂಡಿತು.
Discussion about this post