ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಕಣ್ಣಾಮುಚ್ಚಲೆ ಮುಂದುವರಿದಿದ್ದು, ದೇಶದ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಮುಂದುವರಿದಿದೆ. ಕರ್ನಾಟಕದಲ್ಲಿ ಇಷ್ಟು ಹೊತ್ತಿಗೆ ಮೈಕೊರೆಯುವ ಚಳಿ ಪ್ರಾರಂಭವಾಗಬೇಕಿತ್ತು, ಆದರೆ ಮಳೆಯ ಅಬ್ಬರವೇ ಮುಗಿದಿಲ್ಲ ಇನ್ನು ಚಳಿಯಾದರೂ ಎಲ್ಲಿಂದ.
ಮತ್ತೊಂದು ಕಡೆ ಸೋಮವಾರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಸಾಧ್ಯತೆಗಳಿದೆ ಎಂದು ಹವಮಾನ ಇಲಾಖೆ ಹೇಳಿದ್ದು ಆಂಧ್ರ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು, ಬೆಂಗಳೂರು ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಮಳೆ ನಿರೀಕ್ಷಿಸಲಾಗುತ್ತಿದೆ.
ಆದರೆ ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ ಮುಂದಿನ ಕೆಲ ದಿನಗಳ ಮಟ್ಟಿಗೆ ರಾಜ್ಯದ ಯಾವುದೇ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಇಲ್ಲ. ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ನಿರೀಕ್ಷಿಸಬಹುದು ಅಂದಿದೆ. ಶ್ರೀಲಂಕಾ ಭಾಗದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣದಿಂದಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನವೆಂಬರ್ 28ರಂದು ಮಳೆ ನಿರೀಕ್ಷಿಸಬಹುದಾಗಿದೆ. ಹೀಗಾಗಿ 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು ಜಿಲ್ಲೆಗಳು ಯೆಲ್ಲೊ ಅಲರ್ಟ್ ಪಡೆದಿದೆ.
Discussion about this post