ಬೆಂಗಳೂರು : ವಿದ್ಯಾರ್ಥಿಗಳು ಹಾಗೂ ಬೋಧಕರಿಗೆ ಲಸಿಕೆ ನಿ ಹಂತ ಹಂತವಾಗಿ ಕಾಲೇಜುಗಳನ್ನು ತೆರೆಯುವಂತೆ ಡಾ.ದೇವಿ ಶೆಟ್ಟಿ ನೇತೃತ್ವದ ಸಮಿತಿ ಶಿಫಾರಸು ಮಾಡಿದೆ.
ಈ ಶಿಫಾರಸು ಹಿನ್ನಲೆಯಲ್ಲಿ ಇದೀಗ ಇಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣ ತರಗತಿಗಳನ್ನು ಪ್ರಾರಂಭಿಸುವ ಕುರಿತಂತೆ ರಾಜ್ಯ ಸರ್ಕಾರ ಚಿಂತನೆ ಪ್ರಾರಂಭಿಸಿದೆ. ಆದರೆ 1 ರಿಂದ 10ನೇ ತರಗತಿ ತನಕ ತರಗತಿಗಳನ್ನು ಪ್ರಾರಂಭಿಸುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ.
ಹೀಗಾಗಿ ಇದೀಗ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಹಾಗೂ ಕಾಲೇಜು ಉಪನ್ಯಾಸಕರಿಗೆ ಲಸಿಕೆ ವಿತರಿಸುವ ಕಾರ್ಯಕ್ಕೆ ವೇಗ ನೀಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಈ ನಡುವೆ ಕೋವಿಡ್ ಟಾಸ್ಕ್ ಫೋರ್ಸ್ ಅಧ್ಯಕ್ಷ . ದೇವಿ ಶೆಟ್ಟಿ ವರದಿಯಂತೆ ರಾಜ್ಯಾದ್ಯಂತ ಶಾಲೆಗಳನ್ನು ಶೀಘ್ರವಾಗಿ ಪ್ರಾರಂಭಿಸಿ ಎಂದು ಖಾಸಗಿ ಶಾಲಾ ಕಾಲೇಜು ಆಡಳಿತ ಮಂಡಳಿ ಒತ್ತಾಯಿಸಿದೆ. ಶಾಲೆಗಳು ಕೇವಲ ಕಲಿಕಾ ಕೇಂದ್ರಗಳಲ್ಲ. ಆಟ, ಪಾಠ, ಸ್ನೇಹಿತರ ಸಂಗಮದ ಜಾಗವಾಗಿದೆ. ಹೀಗೆ ಪರಿಸ್ಥಿತಿ ಮುಂದುವರಿದರೆ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆ ದುಶ್ಚಟಗಳಿಗೆ ಬಲಿಯಾಗೋ ಸಾಧ್ಯತೆಗಳಿದೆ ಎಂದು ಅವರು ಎಚ್ಚರಿಸಿದ್ದಾರೆ.
Discussion about this post