ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಅವಧಿ ಮುಕ್ತಾಯಗೊಂಡಿದೆ. ಹಾಗಿದ್ದರೂ ರಾಜ್ಯದಲ್ಲಿ ಮಳೆಯ ಅಬ್ಬರ ಮಾತ್ರ ನಿಂತಿಲ್ಲ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನ ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ಹೇಳಿದೆ.
ಶಾಹೀನ್ ಚಂಡಮಾರುತದ ಪರಿಣಾಮ ಇನ್ನೂ 4 ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಹೇಳಿದ್ದು, ಅಕ್ಟೋಬರ್ 5 ಮತ್ತು 5 ರಂದು ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ಹೀಗಾಗಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಯಲ್ಲೋ ಹಾಗೂ ಆರೆಂಜ್ ಆಲರ್ಟ್ ನೀಡಲಾಗಿದೆ.
ಅಕ್ಟೋಬರ್ 5 ರಂದು ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಹಾಗೂ ಅಕ್ಟೋಬರ್ 6 ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನುಳಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 6 ರಂದು ಆರೆಂಜ್ ಆಲರ್ಟ್ ನೀಡಲಾಗಿದೆ. ಮೈಸೂರು ಮಂಡ್ಯ, ಚಾಮರಾಜನಗರ,ಕೋಲಾರ, ಚಿಕ್ಕಬಳ್ಳಾಪುರ,ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಈ ನಡುವೆ ಭಾನುವಾರ ಬೆಂಗಳೂರಿನಲ್ಲಿ ಸುರಿದ ಮಳೆ ಭಾರೀ ಆವಾಂತರವನ್ನೇ ಸೃಷ್ಟಿಸಿದೆ. ಮತ್ತೆ ಮಳೆ ಮುಂದುವರಿಯಲಿದೆ ಅನ್ನುವ ಸುದ್ದಿ ರಾಜಧಾನಿ ನಿವಾಸಿಗಳಲ್ಲಿ ನಡುಕ ಹುಟ್ಟಿಸಿದೆ.
Discussion about this post