ಬೆಂಗಳೂರು : ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು.
ಇನ್ನು ಸಂಪುಟ ವಿಸ್ತರಣೆಯ ಸರ್ಕಸ್ ಪ್ರಾರಂಭವಾಗಲಿದ್ದು, ಇಂದು ಸಂಜೆ ದೆಹಲಿಗೆ ತೆರಳಲಿರುವ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ, ಯಾರು ಸಚಿವರಾಗಬೇಕು ಅನ್ನುವ ಕುರಿತಂತೆ ಚರ್ಚೆಗಳು ನಡೆಯಲಿದೆ.
Discussion about this post