ಮಂಡ್ಯ : ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೊಮ್ಮಕ್ಕಳೊಂದಿಗೆ ಅಜ್ಜ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗುಡ್ಡೇನಹಳ್ಳಿ ಕ್ರಾಸ್ ಬಳಿಯ ತುಮಕೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಪುಟ್ಟ ಮಕ್ಕಳ ತಾಯಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರನ್ನು ನಾಗಮಂಗಲ ತಾಲೂಕಿನ ಹೊಣಕೆರೆ ಗ್ರಾಮದ ಜೆಡಿಎಸ್ ಮುಖಂಡ ಆನಂದ್ ಕುಮಾರ್ (62), ಮೊಮ್ಮಕ್ಕಳಾದ ಆರಾಧ್ಯ (10) ಮತ್ತು ಗೌರವ್ (05) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಆನಂದ್ ಕುಮಾರ್ ಸೊಸೆ ಮೋನಿಕಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ಸೊಸೆ ಹಾಗೂ ಮೊಮ್ಮಕ್ಕಳ ಜೊತೆಗೆ ಆನಂದ್ ಗುಡ್ಡೇನಹಳ್ಳಿ ಸಮೀಪದ ತೋಟದ ಮನೆಯಿಂದ ಸ್ವಗ್ರಾಮದ ಹೊಣಕೆರೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
Discussion about this post