ಜೂನ್ 30 ಹಾಗೂ ಜುಲೈ 1 ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ನೀಡಲಾಗಿದೆ
ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ತೀವ್ರಗೊಂಡಿದ್ದು, ಜುಲೈ 1 ರ ತನಕ ವರ್ಷಧಾರೆ ಅಬ್ಬರಿಸಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕೃಷಿಕರಲ್ಲಿ ಆತಂಕ ಎದುರಾಗಿತ್ತು.
ಈ ನಡುವೆ ಹವಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಗುಡುಗು ಮಿಂಚು ಸಹಿತ ಮಳೆ ನಿರೀಕ್ಷಿಸಲಾಗಿದೆ. ಹೀಗಾಗಿ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ನೀಡಲಾಗಿದೆ.
ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಿಗೆ ಯಲ್ಲೋ ಆಲರ್ಟ್ ನೀಡಲಾಗಿದೆ.
Discussion about this post