ಮಂಗಳೂರು : ಕಳೆದ ಒಂದು ವಾರದಿಂದ ಕರಾವಳಿ ಹಾಗೂ ಮಲೆನಾಡು ದಿಲ್ಲೆಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಅನೇಕ ಕಡೆಗಳಲ್ಲಿ ಗುಡ್ಡ ಕುಸಿದಿದೆ. ರಸ್ತೆ ಸಂಪರ್ಕ ಕಡಿತಗೊಂಡಿದೆ. ಪರಿಸ್ಥಿತಿ ನೋಡಿದರೆ ಮುಂದೇನು ಅನ್ನುವ ಆತಂಕ ಕಾಡುತ್ತಿದೆ.
ಹಾಸನ,ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಗೂ ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸಹಜವಾಗಿಯೇ ಮಳೆಯ ಕಾರಣದಿಂದ ಸಣ್ಣ ಪುಟ್ಟ ಶೀತ ಜ್ವರ ಕಾಣಿಸಿಕೊಳ್ಳುತ್ತದೆ. ವೈದ್ಯರ ಬಳಿ ಚಿಕಿತ್ಸೆಗಾಗಿ ಹೋಗೋಣ ಅಂದ್ರೆ ಎಲ್ಲಿ ಕೊರೋನಾ ಟೆಸ್ಟ್ ಗೆ ಹೇಳ್ತಾರೋ ಎಂದು ಭಯದಲ್ಲಿದ್ದಾರೆ.
ಇನ್ನು ಮಳೆಯ ಕಾರಣದಿಂದ ಬಹುತೇಕ ಜಿಲ್ಲೆಗಳಲ್ಲಿ ಕೃಷಿ ಜಮೀನು ಮುಳುಗಡೆಯಾಗಿದ್ದು, ಕೃಷಿಕರು ಕಂಗಲಾಗಿದ್ದಾರೆ. ಉತ್ತರ ಕನ್ನಡದ ಸಿದ್ದಾಪುರದಲ್ಲಿ ವರದಾ ನದಿ ತುಂಬಿ ಹರಿಯುತ್ತಿದ್ದು ಪ್ರವಾಹದ ಭೀತಿ ಎದುರಾಗಿದೆ.
ಈ ನಡುವೆ ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲೂ ಇಂದು ಮಳೆ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Discussion about this post