ಮಂಗಳೂರು : ರಾಜ್ಯದಲ್ಲಿ ಒಂದಿಷ್ಟು ದಿನ ಬ್ರೇಕ್ ನೀಡಿದ್ದ ಮುಂಗಾರು ಇದೀಗ ಮತ್ತೆ ಚುರುಕಾಗಿದೆ.ಈ ನಡುವೆ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುತ್ತಿದ್ದು, ಇದು ತೀವ್ರವಾಗಲಿದೆ ಎಂದು ಹವಮಾನ ಇಲಾಖೆ ಹೇಳಿದೆ. ಸಪ್ಟೆಂಬರ್ 5ವರೆಗೂ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು. ಕರಾವಳಿ, ಮಲೆನಾಡು ಹಾಗೂ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಸಪ್ಟಂಬರ್ 5 ಮತ್ತು 6ರಂದು ಕಲ್ಯಾಣ ಕರ್ನಾಟಕದ ಬೀದರ್, ಕಲಬುರ್ಗಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ , ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಗೂ ಹಳದಿ ಅಲರ್ಟ್ ನೀಡಲಾಗಿದೆ.
ಈಗಾಗಲೇ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುತ್ತಿದ್ದು, ಕೊಡಗು, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಹಾಸನ ಹಾಗೂ ತುಮಕೂರು ಜಿಲ್ಲೆಯ ಕೆಲವು ಕಡೆಗಳಲ್ಲಿ ಉತ್ತಮ ಮಳೆ ಸುರಿದಿದ್ದು, ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆ ಬಿದ್ದಿದೆ. ಶುಕ್ರವಾರದಿಂದ ಈ ಭಾಗಗಳಲ್ಲಿ ಮಳೆ ಚುರುಕಾಗಿದೆ.
Discussion about this post