ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಲಸಿಕೆಯ ಕೊರತೆ ತೀವ್ರವಾಗಿದೆ. ಮೇ 1 ರಿಂದ ವಯಸ್ಕರಿಗೆಲ್ಲಾ ಲಸಿಕೆ ಎಂದು ಘೋಷಿಸಿದ ಕಾರಣ ಆಗಿರುವ ಯಡವಟ್ಟಿನಿಂದ ದೇಶ ಇನ್ನೂ ಹೊರ ಬಂದಿಲ್ಲ. ಲಸಿಕೆಯ ಬೇಡಿಕೆ ಮತ್ತು ಉತ್ಪಾದನಾ ಸಾಮರ್ಥ್ಯದ ಬಗ್ಗೆ ತಲೆ ಕೆಡಿಸಿಕೊಳ್ಳದಿರುವ ಪರಿಣಾಮ ಜನ ಇಂದು ಲಸಿಕೆಗಾಗಿ ಪರದಾಡುವಂತಾಗಿದೆ.
ರಾಜ್ಯದಲ್ಲೂ ಲಸಿಕೆಯ ಕೊರತೆಯಿಂದಾಗಿ ಕೋವ್ಯಾಕ್ಸಿನ್ ಮೊದಲ ಡೋಸ್ ಪಡೆದವರು ಎರಡನೇ ಡೋಸ್ ಗಾಗಿ ಕಾಯುತ್ತಿದ್ದಾರೆ. ಕೋವಿಶೀಲ್ಡ್ ಲಸಿಕೆಯ ಎರಡನೇ ಡೋಸ್ ಸುದೀರ್ಘ ಗ್ಯಾಪ್ ಇರೋ ಕಾರಣ ದೊಡ್ಡ ಮಟ್ಟದ ಸಮಸ್ಯೆಯಾಗಿಲ್ಲ. ಆದರೆ ಕೋವ್ಯಾಕ್ಸಿನ್ ಪರಿಸ್ಥಿತಿ ಹಾಗಿಲ್ಲ.
ಈ ನಡುವೆ ಕೇಂದ್ರ ಸರ್ಕಾರದಿಂದ 1.64 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ಪೂರೈಕೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಾ. ಸುಧಾಕರ್, ಕೇಂದ್ರ ಸರ್ಕಾರದಿಂದ ಈವರೆಗೆ 15.86 ಲಕ್ಷ ಡೋಸ್ ಲಸಿಕೆ ಪೂರೈಕೆಯಾಗಿದೆ ಅಂದಿದ್ದಾರೆ.
ಇನ್ನು ಇಂದು ಕೇಂದ್ರ ಸರ್ಕಾರದಿಂದ ಪೂರೈಕೆಯಾಗಿರುವ ಲಸಿಕೆಯನ್ನು ಕೋವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಬಾಕಿ ಇರುವವರಿಗೆ ಆದ್ಯತೆ ಮೇರೆಗೆ ನೀಡುವುದಾಗಿ ಹೇಳಿದ್ದಾರೆ.
ಆದರೆ ರಾಜ್ಯ ಸರ್ಕಾರ 1.94 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಖರೀದಿಸಿದೆ. ಆದರೆ ಅದರ ಕಥೆಯೇನಾಗಿದೆ ಅನ್ನೋದು ಗೊತ್ತಿಲ್ಲ.
Discussion about this post