ಬೆಂಗಳೂರು : ಸಪ್ಟೆಂಬರ್ 27 & 29ರಂದು ನಡೆದಿದ್ದ SSLLC ಪೂರಕ ಪರೀಕ್ಷೆಯ ಫಲಿತಾಂಶವನ್ನು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದ್ದಾರೆ.
ಈ ಬಾರಿ ಒಟ್ಟು 53,155 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು. ಈ ಪೈಕಿ 29,522 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯಲ್ಲಿ ಶೇ.55.54ರಷ್ಟು ಫಲಿತಾಂಶ ಬಂದಿದೆ.
ಪೂರಕ ಪರೀಕ್ಷೆಯಲ್ಲಿ ಅಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗ್ರಿಸ್ಮಾ ನಾಯ್ಕ್ (599 ಅಂಕ) ಮೊದಲ ಸ್ಥಾನ ಪಡೆದುಕೊಂಡಿದ್ದು, ಪೂರಕ ಪರೀಕ್ಷೆ ಫಲಿತಾಂಶವನ್ನು https//sslc.karnataka.gov.in ವೆಬ್ ಸೈಟ್ ನಲ್ಲಿ ವೀಕ್ಷಿಸಬಹುದಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ಸರಳೀಕೃತ ಮಾದರಿಯಲ್ಲಿ ಪರೀಕ್ಷೆಗಳು ನಡೆದಿದ್ದವು.
Discussion about this post