ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಮೊಟ್ಟೆ ವಿತರಣೆ
ವಿದ್ಯಾರ್ಥಿಗಳಿಗೆ ವಾರದಲ್ಲಿ ೬ ದಿನಗಳು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಯಾದಗಿರಿಯಲ್ಲಿ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಈ ಸೌಲಭ್ಯವನ್ನು ರಾಜ್ಯದ ೫೦ ಲಕ್ಷ ವಿದ್ಯಾರ್ಥಿಗಳು ಪಡೆಯುತ್ತಿದ್ದು, ಇದಕ್ಕೆ ಅಜೀಂ ಪ್ರೇಮ್ ಜಿ ಕೈಜೋಡಿಸಿದ್ದಾರೆ ಎಂದು ತಿಳಿಸಿದರು.
ಬೆಂಗಳೂರು ಅಜೀಂ ಪ್ರೇಮ್ ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಠಿಕತೆ ವೃದ್ಧಿಸಲು ರಾಜ್ಯದ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲಾಗುತ್ತಿದೆ.