ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
ದಕ್ಷಿಣ ಕನ್ನಡ ಜಿಲ್ಲೆಯಲ್ಲೆಡೆ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಅಂದರೆ ಜುಲೈ 9ಕ್ಕೆ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇದರೊಂದಿಗೆ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ. ಅದರ ಮಾಹಿತಿ ಈ ಕೆಳಗಡೆ ಇದೆ.
Discussion about this post