ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸೌಮ್ಯಾ ರೆಡ್ಡಿ
ಮಾಜಿ ಪ್ರಧಾನಿ ಇಂದಿರಾಗಾಂಧಿ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿ ಇಂದಿಗೆ ೪೦ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಹಿಳಾ ಕಾಂಗ್ರೆಸ್ ಇಂದಿನಿಂದ ಸದಸ್ಯತ್ವ ನೋಂದಣಿ ಅಭಿಯಾನ ಪ್ರಾರಂಭಿಸಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿದರು.
ಜಿಲ್ಲಾ, ಬ್ಲಾಕ್ ಹಾಗೂ ಬೂತ್ ಮಟ್ಟದಲ್ಲಿಯೂ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ರಾಜ್ಯ ಹಾಗೂ ದೇಶದ ಮಹಿಳೆಯರು ಕಾಂಗ್ರೆಸ್ ಗೆ ಸೇರ್ಪಡೆಗೊಂಡು ದೇಶ ಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕು ಎಂದು ಈ ಸಂದರ್ಭದಲ್ಲಿ ಸೌಮ್ಯಾ ರೆಡ್ಡಿ ಕರೆ ನೀಡಿದರು.
ಸಾಮಾಜಿಕ ಜಾಲತಾಣಗಳ ಮೂಲಕವೂ ಸದಸ್ಯತ್ವ ಅಭಿಯಾನವನ್ನು ನಡೆಸಲಾಗುತ್ತಿದ್ದು, ಈ ದೇಶದ ನಾಗರಿಕರಾಗಿರುವ ಯಾವುದೇ ಮಹಿಳೆಯು ನ್ಯಾಯಕ್ಕಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಬಹುದು ಎಂದು ಸೌಮ್ಯಾ ರೆಡ್ಡಿ ಹೇಳಿದರು.