ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಯ ಫಲ
ಕರ್ನಾಟಕ ರಾಜ್ಯ ಆರ್ಥಿಕ ಪ್ರಗತಿಯಲ್ಲಿ ದೇಶದಲ್ಲೇ ಉತ್ತಮ ಸಾಧನೆ ಮಾಡಿದ್ದು, ೨೦೨೩-೨೪ ನೇ ಹಣಕಾಸು ಸಾಲಿನಲ್ಲಿ ಶೇಕಡ ೧೦.೨ರಷ್ಟು ಜಿಎಸ್ಡಿಪಿ ಪ್ರಗತಿ ಸಾಧಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್ಡಿಪಿ ಶೇಕಡ ೮.೨ ಆಗಿದೆ.
ಕಳೆದ ಬಾರಿ ರಾಜ್ಯ ತೀವ್ರ ಬರಗಾಲಕ್ಕೆ ತುತ್ತಾಗಿದ್ದರೂ, ಜಾಗತಿಕವಾಗಿ ಐಟಿ ಮಾರುಕಟ್ಟೆ ಹಿನ್ನಡೆ ಅನುಭವಿಸಿದ್ದರೂ, ರಾಜ್ಯ ಉತ್ತಮ ಆರ್ಥಿಕ ಪ್ರಗತಿ ಸಾಧಿಸಿದೆ. ಕರ್ನಾಟಕದ ತಲಾ ಜಿಎಸ್ಡಿಪಿ ದೇಶದಲ್ಲೇ ಅತ್ಯಧಿಕವಾಗಿದೆ.
ರಾಜ್ಯದಲ್ಲಿ ಬರಗಾಲ ಪರಿಸ್ಥಿತಿಯಿಂದಾಗಿ ಕೃಷಿ ವಲಯದ ಅಭಿವೃದ್ದಿ ಉದ್ದೇಶಿತ ಪ್ರಮಾಣದಲ್ಲಿ ಸಾಧ್ಯವಾಗಿರುವುದಿಲ್ಲ. ಭಾರತದ ಐಟಿ ವಲಯ ೨೦೨೨ರ ಹಣಕಾಸು ಸಾಲಿನಲ್ಲಿ ಶೇಕಡ ೧೫.೫ ರಷ್ಟು ಪ್ರಗತಿ ಕಂಡಿದ್ದು, ೨೦೨೩ರ ಅವಧಿಯಲ್ಲಿ ಶೇಕಡ ೮ಕ್ಕೆ ಕುಸಿತ ಅನುಭವಿಸಿದೆ. ಉತ್ತಮ ಆಡಳಿತ ಮತ್ತು ಬಹುವಲಯಗಳ ಅಭಿವೃದ್ಧಿಯಿಂದಾಗಿ ಕರ್ನಾಟಕ ರಾಜ್ಯದ ಆರ್ಥಿಕತೆ ಸ್ಥಿರವಾಗಿರುವುದು ಕಂಡು ಬಂದಿದೆ.
೨೦೨೪-೨೫ನೇ ಹಣಕಾಸು ಸಾಲಿಗೆ ಎನ್ಎಸ್ಸಿ ಕರ್ನಾಟಕ ರಾಜ್ಯಕ್ಕೆ ಶೇಕಡ ೯.೪ ಜಿಎಸ್ಡಿಪಿ ಪ್ರಗತಿಯನ್ನು ಅಂದಾಜಿಸಿದ್ದು, ಇದು ರಾಷ್ಟ್ರೀಯ ಸರಾಸರಿ ಶೇಕಡ ೧೦.೫ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ.
ಗ್ಯಾರಂಟಿ ಸೇರಿದಂತೆ ರಾಜ್ಯ ಸರ್ಕಾರದ ಹಲವು ಜನಪರ ಯೋಜನೆಗಳು ಅಭಿವೃದ್ಧಿಯ ಫಲ ಎಲ್ಲಾ ವರ್ಗಗಳಿಗೂ ತಲುಪುವುದನ್ನು ಖಾತ್ರಿಪಡಿಸಿವೆ.